Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:39 - ಕನ್ನಡ ಸತ್ಯವೇದವು C.L. Bible (BSI)

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:39
7 ತಿಳಿವುಗಳ ಹೋಲಿಕೆ  

ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಅವರಿಗೆ ಬದಲಾಗಿ ಹುಟ್ಟಿದ ಅವರ ಗಂಡುಮಕ್ಕಳಿಗೆ ಯೆಹೋಶುವ ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿ ಮಾಡಿರಲಿಲ್ಲ. ಆದ್ದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು