Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:41 - ಕನ್ನಡ ಸತ್ಯವೇದವು C.L. Bible (BSI)

41 “ಅದಕ್ಕೆ ನೀವು, ‘ನಾವು ಸರ್ವೇಶ್ವರನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ನಾವೇ ಈಗ ಆ ಮಲೆನಾಡನ್ನು ಹತ್ತಿ ಯುದ್ಧಮಾಡುತ್ತೇವೆ,’ ಎಂದು ಉತ್ತರಕೊಟ್ಟಿರಿ; ನೀವೆಲ್ಲರು ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಮಲೆನಾಡನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅದಕ್ಕೆ ನೀವು - ನಾವು ಯೆಹೋವನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು ಎಂದು ಉತ್ತರ ಕೊಟ್ಟು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವದಕ್ಕಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ “ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ನೀವು ಉತ್ತರಕೊಟ್ಟು ನನಗೆ, “ಯೆಹೋವ ದೇವರಿಗೆ ಪಾಪಮಾಡಿದ್ದೇವೆ. ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ನಾವು ಬೆಟ್ಟವನ್ನು ಹತ್ತಿ ಯುದ್ಧ ಮಾಡುತ್ತೇವೆ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಮೇಲೆ ಬೆಟ್ಟಕ್ಕೆ ಹೊರಟುಹೋಗುವುದು ಸಣ್ಣ ಕೆಲಸ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:41
4 ತಿಳಿವುಗಳ ಹೋಲಿಕೆ  

ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು