Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:42 - ಕನ್ನಡ ಸತ್ಯವೇದವು C.L. Bible (BSI)

42 ಆದರೆ ಸರ್ವೇಶ್ವರ ನನಗೆ, ‘ನಾನು ಇವರ ಮಧ್ಯೆ ಇಲ್ಲವಾದುದರಿಂದ ಇವರು ಸೋತುಹೋಗುವರು; ಯುದ್ಧಮಾಡಲೂಬಾರದು, ಆ ಮಲೆನಾಡಿಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆದರೆ ಯೆಹೋವನು ನನಗೆ - ನಾನು ಇವರ ಮಧ್ಯದಲ್ಲಿ ಇಲ್ಲವಾದದರಿಂದ ಇವರು ಸೋತು ಹೋಗುವರು; ಯುದ್ಧಮಾಡಲೂಬಾರದು, ಆ ಬೆಟ್ಟದ ಸೀಮೆಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ಯೆಹೋವ ದೇವರು ನನಗೆ, “ ‘ಏರಿ ಹೋಗಬೇಡಿರಿ, ಯುದ್ಧಮಾಡಬೇಡಿರಿ. ಏಕೆಂದರೆ ನಾನು ನಿಮ್ಮ ಮಧ್ಯದಲ್ಲಿ ಇಲ್ಲ. ನೀವು ನಿಮ್ಮ ಶತ್ರುಗಳಿಂದ ಸೋಲನ್ನು ಅನುಭವಿಸುವಿರಿ,’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:42
8 ತಿಳಿವುಗಳ ಹೋಲಿಕೆ  

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು