Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:43 - ಕನ್ನಡ ಸತ್ಯವೇದವು C.L. Bible (BSI)

43 “ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:43
8 ತಿಳಿವುಗಳ ಹೋಲಿಕೆ  

ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು