Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:46 - ಕನ್ನಡ ಸತ್ಯವೇದವು C.L. Bible (BSI)

46 “ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:46
8 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು.


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


(ಅಮಾಲೇಕ್ಯರು ಹಾಗು ಕಾನಾನ್ಯರು ಅದರ ಕಣಿವೆಯಲ್ಲಿ ವಾಸಮಾಡುತ್ತಿದ್ದಾರೆ) ಈ ಕಾರಣ ನೀವು ನಾಳೆ ಹಿಂದಿರುಗಿ ಕೆಂಪುಸಮುದ್ರಕ್ಕೆ ಹೋಗುವ ದಾರಿ ಹಿಡಿದು ಮರುಭೂಮಿಗೆ ಪ್ರಯಾಣ ಮಾಡಬೇಕು,” ಎಂದು ಹೇಳಿದರು.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು