ಧರ್ಮೋಪದೇಶಕಾಂಡ 1:7 - ಕನ್ನಡ ಸತ್ಯವೇದವು C.L. Bible (BSI)7 ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ. ಅಧ್ಯಾಯವನ್ನು ನೋಡಿ |