Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:11 - ಕನ್ನಡ ಸತ್ಯವೇದವು C.L. Bible (BSI)

11 ತರುವಾಯ ಸರ್ವೇಶ್ವರ ನನಗೆ, ‘ನೀನು ಈ ಜನರ ಮುಂದುಗಡೆ ಹೊರಡು; ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ನನಗೆ, ‘ನನ್ನ ಜನರನ್ನು ಪ್ರಯಾಣದಲ್ಲಿ ಮುನ್ನಡೆಸು; ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ಆ ದೇಶದಲ್ಲಿ ಅವರು ನೆಲೆಸಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:11
5 ತಿಳಿವುಗಳ ಹೋಲಿಕೆ  

ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು