ಧರ್ಮೋಪದೇಶಕಾಂಡ 10:12 - ಕನ್ನಡ ಸತ್ಯವೇದವು C.L. Bible (BSI)12 “ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ. ಅಧ್ಯಾಯವನ್ನು ನೋಡಿ |