Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:14 - ಕನ್ನಡ ಸತ್ಯವೇದವು C.L. Bible (BSI)

14 ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಪ್ರತಿಯೊಂದೂ ಯೆಹೋವನದೇ, ಉನ್ನತವಾದ ಆಕಾಶವೂ ಯೆಹೋವನದೇ. ಈ ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:14
21 ತಿಳಿವುಗಳ ಹೋಲಿಕೆ  

ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು. ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ.


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು