Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:20 - ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:20
20 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.


“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು