Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:5
10 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,


ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.


ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.


ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು