Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:6 - ಕನ್ನಡ ಸತ್ಯವೇದವು C.L. Bible (BSI)

6 (ಇಸ್ರಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಸಮಾಧಿಮಾಡಿದರು. ಅವನ ಮಗ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 (ಇಸ್ರಾಯೇಲ್ಯರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನಿಗೆ ಸಮಾಧಿಮಾಡಿದರು; ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:6
7 ತಿಳಿವುಗಳ ಹೋಲಿಕೆ  

ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.


ಎರಡನೆಯ ಸಾರಿ ಆರ್ಭಟವಾಗಿ ಮೊಳಗಿಸಿದಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣ ಹೊರಡಬೇಕಾದಾಗ ಆರ್ಭಟವಾಗಿಯೇ ಮೊಳಗಿಸಬೇಕು.


ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು