Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:8 - ಕನ್ನಡ ಸತ್ಯವೇದವು C.L. Bible (BSI)

8 “ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:8
39 ತಿಳಿವುಗಳ ಹೋಲಿಕೆ  

ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.


ಕೀರ್ತಿಸಿರಿ ಪ್ರಭುವನು ಆತನ ಮಂದಿರದಲ್ಲಿರುವವರೇ I ನಮ್ಮ ದೇವಾಲಯದ ಪ್ರಾಕಾರದಲ್ಲಿಹ ಸೇವಕರೇ II


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು