Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:12 - ಕನ್ನಡ ಸತ್ಯವೇದವು C.L. Bible (BSI)

12 ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:12
8 ತಿಳಿವುಗಳ ಹೋಲಿಕೆ  

ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.


ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II


ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು