Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:15 - ಕನ್ನಡ ಸತ್ಯವೇದವು C.L. Bible (BSI)

15 ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವರು; ನೀವು ಆಹಾರದಿಂದ ತೃಪ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಡವಿಯಲ್ಲಿ ದನಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:15
12 ತಿಳಿವುಗಳ ಹೋಲಿಕೆ  

ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.


ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.


ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ.


ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.


ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು