Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:18 - ಕನ್ನಡ ಸತ್ಯವೇದವು C.L. Bible (BSI)

18 “ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹುಬ್ಬುಗಳ ನಡುವೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:18
15 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು