Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:21 - ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಾದರೆ ಭೂವಿುಯ ಮೇಲೆ ಆಕಾಶವು ಎಷ್ಟು ಕಾಲ ನಿಂತಿರುವದೋ ಅಷ್ಟು ಕಾಲ ನೀವೂ ನಿಮ್ಮ ಸಂತತಿಯವರೂ ನಿಮ್ಮ ಪಿತೃಗಳಿಗೆ ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ಆ ದೇಶದಲ್ಲಿ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:21
13 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.


ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.


ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು