Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು; ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:23
8 ತಿಳಿವುಗಳ ಹೋಲಿಕೆ  

ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.


“ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು