Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:24 - ಕನ್ನಡ ಸತ್ಯವೇದವು C.L. Bible (BSI)

24 ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:24
13 ತಿಳಿವುಗಳ ಹೋಲಿಕೆ  

ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು.


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.


ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು,


“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು