Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:25 - ಕನ್ನಡ ಸತ್ಯವೇದವು C.L. Bible (BSI)

25 ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:25
7 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ದಾವೀದನ ಹೆಸರು ಎಲ್ಲಾ ಕಡೆಗಳಲ್ಲಿ ಪ್ರಖ್ಯಾತಿಗೆ ಬಂದಿತು; ಎಲ್ಲಾ ದೇಶಗಳವರೂ ದಾವೀದನಿಗೆ ಭಯಪಡುವಂತೆ ಸರ್ವೇಶ್ವರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು