Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:30 - ಕನ್ನಡ ಸತ್ಯವೇದವು C.L. Bible (BSI)

30 ಆ ಬೆಟ್ಟಗಳು ಜೋರ್ಡನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:30
6 ತಿಳಿವುಗಳ ಹೋಲಿಕೆ  

ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:


ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು