Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:32 - ಕನ್ನಡ ಸತ್ಯವೇದವು C.L. Bible (BSI)

32 ನಾನು ಈಗ ನಿಮಗೆ ತಿಳಿಸುವ ಎಲ್ಲ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:32
14 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,


“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು