ಧರ್ಮೋಪದೇಶಕಾಂಡ 11:4 - ಕನ್ನಡ ಸತ್ಯವೇದವು C.L. Bible (BSI)4 ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಐಗುಪ್ತ್ಯರ ದಂಡು ಅಂದರೆ ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಈಜಿಪ್ಟಿನ ಸೈನಿಕರಿಗೂ ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿಹೋಗುವಂತೆ ಮಾಡಿದುದ್ದನ್ನು ನೋಡಿದ್ದೀರಿ ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ; ಅಧ್ಯಾಯವನ್ನು ನೋಡಿ |