Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:9
19 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.


ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು