Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:10
27 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,


ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ, ತುದಿಯಲ್ಲಿ ನಿಂತು, ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ನಾಡನ್ನು ಕಣ್ಣು ತುಂಬಾ ನೋಡಬಹುದು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


“ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು