ಧರ್ಮೋಪದೇಶಕಾಂಡ 12:11 - ಕನ್ನಡ ಸತ್ಯವೇದವು C.L. Bible (BSI)11 ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿ |
ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.