ಧರ್ಮೋಪದೇಶಕಾಂಡ 12:18 - ಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು. ಅಧ್ಯಾಯವನ್ನು ನೋಡಿ |