ಧರ್ಮೋಪದೇಶಕಾಂಡ 12:25 - ಕನ್ನಡ ಸತ್ಯವೇದವು C.L. Bible (BSI)25 ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀವು ಅದನ್ನು ಭುಜಿಸದೆ ಯೆಹೋವನಿಗೆ ಮೆಚ್ಚಿಗೆಯಾಗಿರುವದನ್ನು ನಡಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀವು ರಕ್ತವನ್ನು ಭುಜಿಸದಿದ್ದರೆ, ಯೆಹೋವ ದೇವರಿಗೆ ಮೆಚ್ಚುಗೆಯಾಗುವುದು. ಅಲ್ಲದೆ ನಿಮಗೂ, ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.