Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:28 - ಕನ್ನಡ ಸತ್ಯವೇದವು C.L. Bible (BSI)

28 “ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:28
15 ತಿಳಿವುಗಳ ಹೋಲಿಕೆ  

ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನನಗೆ ವಿಧೇಯನಾಗಿ ನಡೆದುಕೊಂಡರೆ


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು