Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:3 - ಕನ್ನಡ ಸತ್ಯವೇದವು C.L. Bible (BSI)

3 ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:3
25 ತಿಳಿವುಗಳ ಹೋಲಿಕೆ  

ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?


ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


ನಿಮ್ಮ ಮಕ್ಕಳು ಸೊಂಪಾಗಿ ಬೆಳೆದ ಮರಗಳನ್ನಾಗಲಿ ಎತ್ತರವಾದ ಗುಡ್ಡಗಳನ್ನಾಗಲಿ, ಬೈಲಿನ ಬೆಟ್ಟಗಳನ್ನಾಗಲಿ ಕಂಡಾಗಲೆಲ್ಲ ಅವರ ಬಲಿಪೀಠಗಳನ್ನು ಹಾಗು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುತ್ತಾರೆ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


“ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು