ಧರ್ಮೋಪದೇಶಕಾಂಡ 12:30 - ಕನ್ನಡ ಸತ್ಯವೇದವು C.L. Bible (BSI)30 ಆಗ ನೀವು ಭ್ರಮೆಗೊಂಡು, ನಿಮ್ಮ ಮುಂದೆ ನಾಶವಾದವರ ದುಷ್ಟ ಪದ್ಧತಿಗಳನ್ನು ಅನುಸರಿಸದಂತೆ ಜಾಗರೂಕರಾಗಿರಿ; ‘ಈ ನಾಡಿನ ಜನರು ತಮ್ಮ ದೇವರುಗಳನ್ನು ಹೇಗೆ ಪೂಜಿಸುತ್ತಿದ್ದರೋ ಹಾಗೆಯೇ ನಾವೂ ಪೂಜಿಸುವೆವು’ ಎಂದು ಹೇಳಿಕೊಂಡು ಅವರ ದೇವರುಗಳ ಬಗ್ಗೆ ಎಷ್ಟು ಮಾತ್ರವೂ ಕೇಳಿತಿಳಿದುಕೊಳ್ಳಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಪದ್ಧತಿಗಳನ್ನು ಅನುಸರಿಸಬಾರದು ನೋಡಿರಿ. ನೀವು - ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರು? ಹಾಗೆಯೇ ನಾವೂ ಸೇವಿಸುವೆವು ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ. ಅಧ್ಯಾಯವನ್ನು ನೋಡಿ |