Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:31
24 ತಿಳಿವುಗಳ ಹೋಲಿಕೆ  

ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


“ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?


ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


ಆಗ ನೀವು ಭ್ರಮೆಗೊಂಡು, ನಿಮ್ಮ ಮುಂದೆ ನಾಶವಾದವರ ದುಷ್ಟ ಪದ್ಧತಿಗಳನ್ನು ಅನುಸರಿಸದಂತೆ ಜಾಗರೂಕರಾಗಿರಿ; ‘ಈ ನಾಡಿನ ಜನರು ತಮ್ಮ ದೇವರುಗಳನ್ನು ಹೇಗೆ ಪೂಜಿಸುತ್ತಿದ್ದರೋ ಹಾಗೆಯೇ ನಾವೂ ಪೂಜಿಸುವೆವು’ ಎಂದು ಹೇಳಿಕೊಂಡು ಅವರ ದೇವರುಗಳ ಬಗ್ಗೆ ಎಷ್ಟು ಮಾತ್ರವೂ ಕೇಳಿತಿಳಿದುಕೊಳ್ಳಬೇಡಿ.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ತಮ್ಮ ಪುತ್ರ ಪುತ್ರಿಯರನೇ ಅರ್ಪಿಸಿದರು I ದೆವ್ವಭೂತಗಳಿಗೆ ಅವರನು ಬಲಿಕೊಟ್ಟರು II


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು