Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:5
50 ತಿಳಿವುಗಳ ಹೋಲಿಕೆ  

ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


“ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ದಹನಬಲಿಗಳನ್ನು ಸಮರ್ಪಿಸಬಾರದು. ಎಚ್ಚರಿಕೆ!


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.


ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


“ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.


“ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.


ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು.


ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.


“ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”


ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


“ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.


ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ನಾನು ನನ್ನ ನಾಮವನ್ನು ಮೊದಲು ಪ್ರತಿಷ್ಠಾಪಿಸಿದ ‘ಶಿಲೊ’ ಎಂಬ ಸ್ಥಾನಕ್ಕೆ ಹೋಗಿ ನೋಡಿ. ನನ್ನ ಜನ ಇಸ್ರಯೇಲರ ಅಧರ್ಮದ ನಿಮಿತ್ತ ಆ ಸ್ಥಳಕ್ಕೆ ತಂದ ಗತಿಯನ್ನು ಹೋಗಿ ನೋಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು