Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:7 - ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:7
25 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು.


ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


“ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.


ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ.


ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು