Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:11 - ಕನ್ನಡ ಸತ್ಯವೇದವು C.L. Bible (BSI)

11 ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಇಸ್ರೇಲಿನ ಎಲ್ಲಾ ಜನರಲ್ಲಿ ಭಯವುಂಟಾಗಿ ಅಂಥಾ ಕೆಟ್ಟ ಕೆಲಸವನ್ನು ಎಂದಿಗೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:11
11 ತಿಳಿವುಗಳ ಹೋಲಿಕೆ  

ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.


ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ.


ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು