Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:13 - ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:13
24 ತಿಳಿವುಗಳ ಹೋಲಿಕೆ  

ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.


ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.


ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು