Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:15 - ಕನ್ನಡ ಸತ್ಯವೇದವು C.L. Bible (BSI)

15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:15
17 ತಿಳಿವುಗಳ ಹೋಲಿಕೆ  

ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಇಸ್ರಯೇಲರು ತಿರುಗಿಕೊಂಡು ಬೆನ್ಯಾಮೀನ್ಯ ಪ್ರಾಂತ್ಯದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲ ಊರುಗಳಿಗೆ ಬೆಂಕಿ ಹೊತ್ತಿಸಿದರು.


ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಆ ಕಾಲದಲ್ಲಿ ನಾವು ಅವನ ಎಲ್ಲ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು, ಅವುಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು ಹಾಗು ಮಕ್ಕಳನ್ನು ನಿಶ್ಯೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ,


(ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.


ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು