Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:3 - ಕನ್ನಡ ಸತ್ಯವೇದವು C.L. Bible (BSI)

3 ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:3
21 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು