Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ ಆತನ ಆಜ್ಞೆಗಳನ್ನೇ ಅನುಸರಿಸಿ ಆತನಿಗೇ ವಿಧೇಯರಾಗಿ ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:4
16 ತಿಳಿವುಗಳ ಹೋಲಿಕೆ  

ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು