ಧರ್ಮೋಪದೇಶಕಾಂಡ 13:5 - ಕನ್ನಡ ಸತ್ಯವೇದವು C.L. Bible (BSI)5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |