Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:2 - ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:2
23 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು