Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:21 - ಕನ್ನಡ ಸತ್ಯವೇದವು C.L. Bible (BSI)

21 “ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:21
19 ತಿಳಿವುಗಳ ಹೋಲಿಕೆ  

“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ರೆಕ್ಕೆ ಉಳ್ಳ ಪಕ್ಷಿಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”


“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು