Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸ, ದ್ರಾಕ್ಷಾರಸ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದ್ದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:14
8 ತಿಳಿವುಗಳ ಹೋಲಿಕೆ  

ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಬಿಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು