Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:2 - ಕನ್ನಡ ಸತ್ಯವೇದವು C.L. Bible (BSI)

2 ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ಯೆಹೋವನು ನೇವಿುಸಿದ ಬಿಡುಗಡೆಯ ಸಂವತ್ಸರವು ಬಂತೆಂದು ಪ್ರಕಟವಾದದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:2
13 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


“ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.


ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.


ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು