ಧರ್ಮೋಪದೇಶಕಾಂಡ 15:6 - ಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ದೇವರಾದ ಸರ್ವೇಶ್ವರ ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ದೇವರಾದ ಯೆಹೋವನು ವಾಗ್ದಾನ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲತೆಗೆದುಕೊಳ್ಳುವದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನಮಾಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ. ಅಧ್ಯಾಯವನ್ನು ನೋಡಿ |