ಧರ್ಮೋಪದೇಶಕಾಂಡ 15:9 - ಕನ್ನಡ ಸತ್ಯವೇದವು C.L. Bible (BSI)9 ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |