Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:1 - ಕನ್ನಡ ಸತ್ಯವೇದವು C.L. Bible (BSI)

1 “ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:1
16 ತಿಳಿವುಗಳ ಹೋಲಿಕೆ  

“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ಚೈತ್ರಮಾಸದ ಈ ದಿನದಂದು ನೀವು ಹೊರಟವರು.


‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು.


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


“ನೀವು ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು