Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:11 - ಕನ್ನಡ ಸತ್ಯವೇದವು C.L. Bible (BSI)

11 ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:11
16 ತಿಳಿವುಗಳ ಹೋಲಿಕೆ  

ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು