Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:17 - ಕನ್ನಡ ಸತ್ಯವೇದವು C.L. Bible (BSI)

17 ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:17
10 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.


ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು