Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:19 - ಕನ್ನಡ ಸತ್ಯವೇದವು C.L. Bible (BSI)

19 “ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:19
35 ತಿಳಿವುಗಳ ಹೋಲಿಕೆ  

“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.


“ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು